ವ್ಯಾಪಾರ ಮತ್ತು ಹಣಕಾಸು

ಅಡಕೆ ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್ !

ಮಂಗಳೂರು: ಅಡಕೆ ಬೆಳೆಗಾರರಿಗೆ ಗುಡ್‌ ನ್ಯೂಸ್‌ ಒಂದು ಸಿಕ್ಕಿದ್ದು, ಅಡಕೆ ಖರೀದಿಗೆ ಈಗ ಅಂತಾರಾಜ್ಯ ಸಹಕಾರ ಸಂಸ್ಥೆ ಕ್ಯಾಂಪ್ಕೋ, ಬೆಳೆಗಾರರ ಮನೆಗೆ ಧಾವಿಸುತ್ತಿದೆ ಎನ್ನುವ ಅಂಶ ತಿಳಿದು ಬಂದಿದೆ.

ಕ್ಯಾಂಪ್ಕೋ ತನ್ನ ಅಡಕೆ ಖರೀದಿ ನೀತಿಯನ್ನ ಬದಲಾಯಿಸುತ್ತಿದ್ದು, ಕ್ಯಾಂಪ್ಕೋ ಆನ್‌ ವೀಲ್‌ ಯೋಜನೆಯಡಿ ಬೆಳೆಗಾರರ ಮನೆಗೆ ತೆರಳಿ ಬೆಳೆ ಖರೀದಿ ಮಾಡುತ್ತೆ. ಇನ್ನು ಈಗಾಗ್ಲೇ ಕ್ಯಾಂಪ್ಕೋ ಪ್ರಾಯೋಗಿಕವಾಗಿ ಪುತ್ತೂರು, ವಿಟ್ಲ ವ್ಯಾಪ್ತಿಯಲ್ಲಿ ಬೆಳೆಗಾರರ ಮನೆಗೆ ತೆರಳಿ ಅಡಕೆ ಖರೀದಿಸುತ್ತಿದೆ. ಇನ್ನಿದಕ್ಕೆ ಬೆಳೆಗಾರರಿಂದ ವ್ಯಾಪಕ ಸ್ಪಂದನೆಯೂ ವ್ಯಕ್ತವಾಗುತ್ತಿದೆ.

ಈ ಕ್ಯಾಂಪ್ಕೋ ಆನ್‌ ವೀಲ್‌ ಯೋಜನೆಯಡಿ ಅಪೇಕ್ಷಿಸಿದ ಬೆಳೆಗಾರರ ಬಳಿಗೆ ತೆರಳಿ ಅಡಕೆ ಖರೀದಿಸುತ್ತಿದೆ. ಈ ಕಾಲದ ಅವಶ್ಯಕತೆಗೆ ಅನುಗುಣವಾಗಿ ಕ್ಯಾಂಪ್ಕೋ ತನ್ನ ಅಡಕೆ ಖರೀದಿ ನೀತಿಯನ್ನ ಬದಲಾಯಿಸುತ್ತಿದೆ.

ಅಡಕೆ ಮಾರಾಟ ಮಾಡಲು ಇಚ್ಛಿಸುವ ಬೆಳೆಗಾರರು ಸಮೀಪದ ಕ್ಯಾಂಪ್ಕೋ ಶಾಖೆಗೆ ಕರೆ ಮಾಡಿದರೆ ಸಾಕು, ಕ್ಯಾಂಪ್ಕೋ ಸಿಬ್ಬಂದಿ ಮನೆಗೆ ಹಾಜರಾಗುತ್ತಾರೆ. ಅಲ್ಲೇ ಅಡಕೆಗೆ ದರ ನಿಗದಿಪಡಿಸಿ, ತೂಕ ಮಾಡಿ ವಾಹನದಲ್ಲಿ ಕ್ಯಾಂಪ್ಕೋ ಶಾಖೆಗೆ ತೆಗೆದುಕೊಂಡು ಹೋಗುತ್ತಾರೆ. ಬಳಿಕ ಮಾರಾಟದ ಮೊತ್ತವನ್ನು ನೇರ ಬೆಳೆಗಾರರ ಖಾತೆಗೆ ಜಮೆ ಮಾಡುತ್ತಾರೆ. ಅವಶ್ಯಕತೆ ಇದ್ದರೆ ನಗದು ರೂಪದಲ್ಲೂ ಪಾವತಿಸುತ್ತಾರೆ. ಅಡಕೆ ಸಾಗಾಟಕ್ಕೆ ಸಣ್ಣ ಪ್ರಮಾಣದ ಸಾಗಾಟ ವೆಚ್ಚ ಪಡೆಯುತ್ತಾರೆ.

ಕರಾವಳಿಯುದ್ದಕ್ಕೂ ಕ್ಯಾಂಪ್ಕೋ 155 ನೇರ ಹಾಗೂ ಉಪ ಖರೀದಿ ಕೇಂದ್ರಗಳನ್ನು ಹೊಂದಿದೆ. ಪ್ರಸ್ತುತ ಸುಮಾರು 1.15 ಲಕ್ಷ ಮಂದಿ ಅಡಕೆ ಬೆಳೆಗಾರ ಸದಸ್ಯರಿದ್ದಾರೆ. ಕ್ಯಾಂಪ್ಕೋ ಶಾಖೆಗಳಲ್ಲೂ ಖರೀದಿ ಕೇಂದ್ರ ತೆರೆದಿರುತ್ತದೆ. ಬೆಳೆಗಾರರ ಮನೆ ಬಾಗಿಲಿಗೆ ಕ್ಯಾಂಪ್ಕೋ ತೆರಳುವುದರಿಂದ ಖರೀದಿ ಕೇಂದ್ರದ ಮೇಲಿನ ಒತ್ತಡವೂ ಕಡಿಮೆಯಾಗಲಿದೆ.

Related Articles

Leave a Reply

Your email address will not be published. Required fields are marked *

You cannot copy content of this page