ರಾಜ್ಯ

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ.!

ಬೆಂಗಳೂರು: ರಾಜ್ಯದಲ್ಲಿ ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನವೆಂಬರ್ .18 ರಿಂದ ನವೆಂಬರ್ .19ರವರೆಗೆ ಹಾಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನವೆಂಬರ್ .18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ .

Related Articles

Leave a Reply

Your email address will not be published. Required fields are marked *

You cannot copy content of this page