ರಾಜ್ಯ

ನಾಳೆ ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ .!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಲಿದ್ದು, ನಾಳೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ಸಾರಿಗೆ ನೌಕರರು  ಡಿಸೆಂಬರ್ 10 ರ ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ನೌಕರರು ಜಾಥ ತೆರಳಲಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ಎನ್​​ಇಕೆಆರ್​​ಟಿಸಿ ಸೇರಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

You cannot copy content of this page