ರಾಜ್ಯ

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು.!

ಬೆಂಗಳೂರು :- ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಕುರಿತು ಹೆಚ್ಚಿನ ವಿವರ ತಿಳಿದುಬರಬೇಕಾಗಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಟಿ ಜಯಶ್ರೀ ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಾವಿನ ಬಗ್ಗೆ ಮಾತನಾಡಿದ್ದ ನಟಿ ಜಯಶ್ರೀ 7 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿಕೊಂಡಿದ್ದರು.

ಮಾತ್ರವಲ್ಲದೇ 5 ವರ್ಷ ವಯಸ್ಸಿನಲ್ಲೇ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ನನ್ನ ಮೇಲೆ ಹುಡುಗಿಯರೂ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ನನಗೆ ದಯಾಮರಣ ಬೇಕು ಎಂದೆಲ್ಲ ಕೇಳಿಕೊಂಡಿದ್ದರು. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಉಪ್ಪು ಹುಳಿ ಖಾರ ಮತ್ತು ಕನ್ನಡ್ ಗೊತ್ತಿಲ್ಲ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಜಯಶ್ರೀ ರಿಯಾಲಿಟಿ ಶೋ ಬಿಗ್‍ಬಾಸ್ ಮೂಲಕ ಖ್ಯಾತಿ ಪಡೆದುಕೊಂಡಿದ್ದರು. ಆದರೆ, ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಅಭಿಮಾನಿಗಳಿಗೆ ನೋವು ತಂದಿದೆ.

Related Articles

Leave a Reply

Your email address will not be published. Required fields are marked *

You cannot copy content of this page