ರಾಜ್ಯ

ನಿಯಮ ಉಲ್ಲಂಘಿಸಿ BPL’ ಕಾರ್ಡ್ ಪಡೆದವರಿಗೆ ಶಾಕಿಂಗ್ ನ್ಯೂಸ್!

ಬೆಳಗಾವಿ :- ರಾಜ್ಯದಲ್ಲಿ ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು, ಅನರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಎನ್ನುವ ಬಗ್ಗೆ ಸರ್ವೆ ಕಾರ್ಯ ನಡೆಸಲಾಗುತ್ತಿದ್ದು, ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರಿದ್ದಾರೆ. ಅನಧಿಕೃತ ಪಡಿತರ ಚೀಟಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ತಹಶೀಲ್ದಾರ್, ಪಿಡಿಒ, ಗ್ರಾಪಂ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರತಿಗ್ರಾಮಗಳಲ್ಲಿ ಸರ್ವೆ ಮಾಡಿಸಲಾಗುವುದು. ಅನಧಿಕೃತ ಕಾರ್ಡ್ ಪತ್ತೆ ಹಚ್ಚಲಾಗುವುದು. ಮಾರ್ಚ್ 31ರೊಳಗೆ ಅನಧಿಕೃತ ಪಡಿತರ ಚೀಟಿದಾರರ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಬಳಿಕವೇ ಅನಧಿಕೃತ ಕಾರ್ಡ್‍ಗಳನ್ನು ರದ್ದುಪಡಿಸಲಾಗುವುದು ಎಂದರು.

ಬಿಪಿಎಲ್ ಕಾರ್ಡ್ ಪಡೆಯಲು ಅದರದೇ ಆದ ಮಾನದಂಡಗಳಿವೆ. ಮಾನದಂಡ ಉಲ್ಲಂಘಿಸಿ ಕಾರ್ಡ್ ಪಡೆದಿದ್ದರೆ ಅಂಥ ಕಾರ್ಡ್‍ಗಳನ್ನು ರದ್ದು ಮಾಡಲಾಗುವುದು. ಅರ್ಹ ಫಲಾನುಭವಿಗಳಿಗೆ ಮಾತ್ರವೇ ಬಿಪಿಎಲ್ ಕಾರ್ಡ್ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

You cannot copy content of this page