ರಾಜ್ಯ

ರಾಜ್ಯ ಸರ್ಕಾರದಿಂದ ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲೇ ಉಚಿತ ಮರಳು’ ನೀತಿ ಜಾರಿ.

ಬೆಂಗಳೂರು :-  ಮನೆ ಕಟ್ಟುವವರಿಗೆ ಗಣಿ ಹಾಗೂ ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಉಚಿತ ಮರಳು ನೀತಿ ತರಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

10 ಲಕ್ಷಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆ ಕಟ್ಟುವವರಿಗೆ ಸರ್ಕಾರವೇ ಉಚಿತವಾಗಿ ಮರಳು ಪೂರೈಸುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಶೀಘ್ರದಲ್ಲೇ ಉಚಿತ ಮರಳು ನೀತಿ ತರಲಿದ್ದೇವೆ ಎಂದರು. ರಾಜ್ಯದಲ್ಲಿ ಹೊಸ ಮರಳು ನೀತಿ ಶೀಘ್ರದಲ್ಲೇ ಜಾರಿಗೆ ತರುತ್ತೇವೆ, ಈ ಸಂಬಂಧ ಸಮಿತಿ ರಚಿಸಿ ಅಧ್ಯಯನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಗಣಿ ವಿಚಾರದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಉಗ್ರ ಕ್ರಮ ಜರುಗಿಸಲಾಗುವುದು. ರಾಜ್ಯದ ಎಲ್ಲ ಕಂದಾಯ ವಿಭಾಗದಲ್ಲೂ ಗಣಿ ಅದಾಲತ್ ಜಾರಿಯಾಗಲಿದೆ. ಪರವಾನಗಿ ನೀಡಲು ಏಕಗವಾಕ್ಷಿ ಯೋಜನೆ ಜಾರಿಗೆ ತರಲಿದ್ದೇವೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

You cannot copy content of this page