ರಾಜ್ಯ

ರಾಜ್ಯಕ್ಕೆ ವೀಕೆಂಡ್ ಲಾಕ್‌ಡೌನ್ ಶಾಕ್! ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು :- ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ನಿನ್ನೆ ಸರ್ವಪಕ್ಷಗಳ ಸಭೆಯ ಬಳಿಕ ರಾಜ್ಯದಲ್ಲಿ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್​ ಕರ್ಫ್ಯೂ, ಮತ್ತು ವೀಕೆಂಡ್​ನಲ್ಲಿ ಕರ್ಫ್ಯೂ (ಶುಕ್ರವಾರ ಸಂಜೆ 9ಗಂಟೆಯಿಂದ ಶನಿವಾರ ಬೆಳಗ್ಗೆ 6ರವರೆಗೆ) ಜಾರಿಯಲ್ಲಿರುತ್ತದೆ. ಏಪ್ರಿಲ್​ 21ರಿಂದ ಮೇ 14ರವರೆಗೆ ರಾಜ್ಯದಲ್ಲಿ ಈ ಹೊಸ ನಿಯಮಗಳು ಜಾರಿಯಲ್ಲಿರಲಿದೆ.

ಸರ್ವಪಕ್ಷ ಸಭೆ ಬಳಿಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು , ರಾಜ್ಯದ ಜನತೆ ಕೊರೊನಾ ಕರ್ಪ್ಯೂ ವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು, ಕೊರೊನಾ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರದ ಮಾರ್ಗಸೂಚಿಯ ಪ್ರಮುಖ ಅಂಶಗಳು :- 

* ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ವರೆಗೆ (ಏಪ್ರಿಲ್​ 21ರಿಂದ ಮೇ 4ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.
* ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ.
* ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್​.ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ
* ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು
* ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ
* ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ
* ದೇವಸ್ಥಾನ ಸೇರಿ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು
* ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ
* ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ
* ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ
* ಆಹಾರ ಸಂಬಂಧಿ ಅಂಗಡಿಗಳು, ದಿನಸಿ ಅಂಗಡಿ, ಹಣ್ಣು ತರಕಾರಿ ಅಂಗಡಿ, ಡೇರಿ, ಮಿಲ್ಕ್​ ಬೂತ್​, ಮೀನು * ಮಾಂಸದ ಅಂಗಡಿ ತೆರೆಯಲು ಅನುಮತಿ
* ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ
* ಬಾರ್​, ಎಂಆರ್​ಪಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ
* ಬ್ಯಾಂಕ್​, ಇನ್ಶೂರೆನ್ಸ್​ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ
* ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ
* ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರೆತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ವರ್ಕ್​ ಫ್ರಂ ಹೋಂ
* ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ
* ಸರ್ಕಾರಿ ಕಚೇರಿಗಳಲ್ಲಿ ಶೇ. 50 ಸಿಬ್ಬಂದಿ ಕೆಲಸಕ್ಕೆ ಅನುಮತಿ
* ಜಿಲ್ಲೆಗಳ ನಡುವೆ ಮತ್ತು ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ
* ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ
* ಮದುವೆಗಳಲ್ಲಿ ಕೇವಲ 50 ಜನರಿಗೆ ಅವಕಾಶ
* ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಅವಕಾಶ

ಇದರ ಹೊರತಾಗಿ ವೀಕೆಂಡ್ ಕರ್ಫ್ಯೂ ದಿನಗಳಲ್ಲಿ ಬೆಳಗ್ಗೆ 6ರಿಂದ 10ಗಂಟೆ ಒಳಗೆ ಹಾಲು, ತರಕಾರಿ, ಹಣ್ಣು ಸೇರಿ ಅಗತ್ಯ ವಸ್ತುಗಳನ್ನು ಜನ ಖರೀದಿಸಬೇಕಾಗುತ್ತದೆ. ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

Related Articles

Leave a Reply

Your email address will not be published. Required fields are marked *

You cannot copy content of this page