ರಾಜ್ಯ

ರಾಜ್ಯದಲ್ಲಿ ಭಾಗಶಃ ಲಾಕ್ ಡೌನ್ : ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ.

ಬೆಂಗಳೂರು :- ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ.

ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.

ಮಠ, ಮಂದಿರ, ಮಸೀದಿ, ಚರ್ಚ್ ಗಳಿಗೆ ಸಾರ್ವಜನಿಕರ ಪ್ರವೇಶ್ ನಿರ್ಬಂಧಿಸಲಾಗಿದೆ. ರಾಜ್ಯ ಸರಕಾರ 24 ಗಂಟೆಯಲ್ಲಿ ಕೋವಿಡ್ ಪರಿಷ್ಕೃತ ಮಾರ್ಗಚೂಚಿ ಬಿಡುಗಡೆ ಮಾಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಭಾಗಶಃ ಲಾಕ್ ಡೌನ್ ಘೋಷಿಸಿದೆ.

ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಧಿಸಿ ರಾಜ್ಯ ಸರಕಾರ ಬುಧವಾರ ರಾತ್ರಿ ಮಾರ್ಗಸೂಚಿ ಹೊರಡಿಸಿತ್ತು. ಆದರೆ ರಾಜ್ಯದಲ್ಲಿ ಎಂದಿನಂತೆ ಜನರು ಓಡಾಟ ನಡೆಸಿದ್ದು, ಮಾರ್ಗಸೂಚಿ ಪಾಲಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಯಾವುದಕ್ಕೆ ಅನುಮತಿ?

 1. ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲಾ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ
 2. ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೂ ಯಾವುದೇ ನಿರ್ಬಂಧವಿಲ್ಲ
 3. ಎಲ್ಲಾ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು
 4. ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯ
 5. ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು ತರಕಾರಿ, ಹಾಲಿನ ಬೂತ್, ಮೀನು-ಮಾಂಸ, ಪಶು ಆಹಾರ ಅಂಗಡಿಗಳ ಸೇವೆ ಅಭಾಧಿತ
  ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂಪಿನ ವ್ಯಾಪಾರ ನಡೆಸಲು ಅನುಮತಿ. ಕಟ್ಟಡದಲ್ಲಿ ನಡೆಸುವಂತಿಲ್ಲ
 6. ಬ್ಯಾಂಕ್, ವಿಮಾ ಕಚೇರಿ, ಎಟಿಎಂ, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ, ಷೇರು ವಿನಿಮಯ ಸೇವಾ ಕೇಂದ್ರಗಳಿಗೆ ಅವಕಾಶ
 7. ಮದುವೆ ಸಮಾರಂಭಗಳಿಗೆ ಕೇವಲ 50 ಜನರಿಕೆ ಅವಕಾಶ
 8. ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಅವಕಾಶ
  ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಣಿಕೆ ಮುಕ್ತ ಅವಕಾಶ. ಯಾವುದೇ ಪೂರ್ವಾನುಮತಿ ಬೇಕಿಲ್ಲ
 9. ಮೆಟ್ರೋ, ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ. ಒಟ್ಟು ಆಸನ ಸಾಮರ್ಥ್ಯ ಶೇ.50 ಮಾತ್ರ.

ಯಾವುದಕ್ಕೆ ನಿರ್ಬಂಧ?

 • ಶಾಲೆ ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ ಬಂದ್
 • ಚಿತ್ರಮಂದಿರ, ಶಾಪಿಂಗ್ ಮಾಲ್, ಜಿಮ್, ಸ್ಪಾ, ಈಜುಕೊಳ, ಕ್ರೀಡಾ ಸಂಕೀರ್ಣ, ಅಮ್ಯಾಸ್ ಮೆಂಟ್ ಪಾರ್ಕ್, ಸಭಾಂಗಣ, ಅಸೆಂಬ್ಲಿ ಹಾಲ್ ಬಂದ್
 • ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ. ಆದ್ರೇ ದೈನಂದಿನ ಪೂಜಾ ಕೈಂಕರ್ಯಕ್ಕೆ ತಡೆ ಇಲ್ಲ
 • ಹೋಟೆಲ್, ರೆಸ್ಟೋರೆಂಟ್, ಲಿಕ್ಕರ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ
 • ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ನಿಷೇಧ
 • ಲಾಡ್ಜ್ ಗಳಲ್ಲಿ ಈಗಾಗಲೇ ತಂಗಿರುವ ಅತಿಥಿಗಳಿಗೆ ಮಾತ್ರ ಸೇವೆ ಒದಗಿಸಲು ಅವಕಾಶ
 • ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚತಕ್ಕದ್ದು.

Related Articles

Leave a Reply

Your email address will not be published. Required fields are marked *

You cannot copy content of this page