ರಾಜ್ಯ

ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸಿಗಲಿದೆ ಹಾಲು-ತರಕಾರಿ; ಮಧ್ಯಾಹ್ನದವರೆಗೆ ದಿನಸಿಯೂ ಲಭ್ಯ.

ಬೆಂಗಳೂರು :- ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬೀಳುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಜನತಾ ಕರ್ಪ್ಯೂ ನಿಯಮ ಸಡಿಲಿಕೆ ಮಾಡಿದೆ. ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಂಜೆ 6 ಗಂಟೆಯವರೆಗೆ ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಎಪಿಎಂಸಿಗಳಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇವುಗಳಿಗೆ ಪರ್ಯಾಯವಾಗಿ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಹಾಪ್‌ಕಾಮ್ಸ್‌ಗಳು ಹಾಗೂ ಎಲ್ಲ ರೀತಿಯ ಹಾಲಿನ ಬೂತ್‌ಗಳು, ತಳ್ಳುವ ಗಾಡಿಗಳಲ್ಲಿ ಹಣ್ಣು ತರಕಾರಿ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಈ ಮೊದಲು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ಮಾತ್ರ ಅವಕಾಶ ವಿಸ್ತರಿಸಲಾಗಿತ್ತು. ಈಗ 12 ಗಂಟೆವರೆಗೆ ದಿನಸಿ ಸಂಜೆ 6 ಗಂಟೆಯವರೆಗೆ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

You cannot copy content of this page