ರಾಜ್ಯ

ಮೇ.10ರಿಂದ ಮೇ.24 ರವರೆಗೆ ರಾಜ್ಯಾಧ್ಯಂತ ಸಂಪೂರ್ಣ ಲಾಕ್ ಡೌನ್ – ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು :- ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆಗಂಟೆಗೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಇದರಿಂದಲೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಾರದಿದ್ದರಿಂದ ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿರ್ಬಂಧಿಸಲಾಗಿದೆ ಎಂದರು.

ಆಹಾರ, ಹಾಲು, ತರಕಾರಿ ಮಾರಾಟಕ್ಕೆ ಅನುಕೂಲುವಾಗುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಹಾಲಿನ ಅಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ. ತಳ್ಳೋ ಗಾಡಿಯಲ್ಲಿ ಕೂಡ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗೆ ಹೋಗದೋದಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತು ಕೊಂಡೊಯ್ಯೋದಕ್ಕೆ ಅವಕಾಶ ನೀಡಲಾಗಿದೆ .

ನಿಗಧಿತ ಕಟ್ಟಡದೊಳಗೆ ಜನರನ್ನು ಬಳಸಿಕೊಂಡು ಕೆಲಸ ಮಾಡೋದಕ್ಕೆ ಅವಕಾಶ. ವಿವಾಹದಲ್ಲಿ 50 ಜನರಿಗೆ ಮಾತ್ರ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿದೆ. ಹೆಚ್ಚು ಜನರು ಭಾಗವಹಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Related Articles

Leave a Reply

Your email address will not be published. Required fields are marked *

You cannot copy content of this page