ರಾಷ್ಟ್ರ

ಫೇಸ್‌ಬುಕ್, ಟ್ವಿಟರ್‌ಗೆ ನಿಷೇಧದ ಭೀತಿ : ನಿಯಮ ಪಾಲಿಸದಿದ್ದರೆ ಮೇ. 26ರಿಂದ ಫೇಸ್‌ಬುಕ್, ಟ್ವಿಟರ್ ಬ್ಲಾಕ್ !

ನವದೆಹಲಿ :- ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂಗೆ ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಪರಿಷ್ಕರಿಸಿರುವ ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳನ್ನು ಇದುವರೆಗೂ ಒಪ್ಪದ ಟ್ವಿಟರ್ , ಫೇಸ್‌ಬುಕ್, ಇನ್‌ಸ್ಟಾಗ್ರಾಂ ಭಾರತದಲ್ಲಿ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿದೆ.

ನಿಯಮ ಪಾಲನೆ ಅಧಿಕಾರಿಗಳ ನೇಮಕ, ಭಾರತದಲ್ಲಿರುವ ಆ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ಸಂಖ್ಯೆ ಸಲ್ಲಿಕೆ, ದೂರುಗಳು ಬಂದರೆ ಕೂಡಲೇ ಪರಿಹರಿಸುವುದು, ಆಕ್ಷೇಪಾರ್ಹ ಕಂಟೆಂಟ್‌ ಗಳ ಮೇಲೆ ನಿಗಾ ಇಡುವುದು ಮತ್ತು ಅವುಗಳನ್ನು ತೆಗೆದುಹಾಕುವುದು ಸೇರಿದಂತೆ ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಕಳೆದ ಫೆ.25ರಂದು ಸರಕಾರ ಸೂಚಿಸಿತ್ತು.ಜತೆಗೆ ಇದನ್ನು ಪೂರ್ಣಗೊಳಿಸಲು 3 ತಿಂಗಳ ಗಡುವು ನೀಡಿತ್ತು. ಮೇ 26ರಂದು ಈ ಗಡುವು ಮುಗಿದಿದ್ದು, ಜಾಲತಾಣಗಳಿಗೆ ನಿಷೇಧದ ಭೀತಿ ಶುರುವಾಗಿದೆ.

ಸುದ್ದಿ ತಾಣಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ಕೇಂದ್ರ ಫೆಬ್ರವರಿಯಲ್ಲಿ ಜಾರಿಗೆ ತಂದಿದೆ. ಈ ನಿಯಮವನ್ನು ಅನುಸರಿಸಲು ಮೇ. 26ರ ಅಂತಿಮ ಗಡುವನ್ನು ನೀಡಲಾಗಿದೆ. ಇನ್ನೆರಡು ದಿನದಲ್ಲಿ ಈ ನಿಯಮ ಪಾಲಿಸಲು ನಿರಾಕರಿಸಿದರೆ, ಸಾಮಾಜಿಕ ಮಾಧ್ಯಮ ಕಂಪನಿಗಳ ಸೇವೆ ಬ್ಲಾಕ್ ಆಗಲಿದೆ. ಕಾನೂನು ಪ್ರಕಾರ ಕ್ರಿಮಿನಲ್ ಕ್ರಮಕ್ಕೆ ಎದುರಿಬೇಕಾಗಿದೆ.

Related Articles

Leave a Reply

Your email address will not be published. Required fields are marked *

You cannot copy content of this page