ರಾಜ್ಯ

ರಾಜ್ಯದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಅತ್ಯವಶ್ಯಕ

ಬೆಂಗಳೂರು :- ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಜಾರಿಗೆ ಬಂದಿರುವಂತ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವಂತ ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ವಿಶೇಷ ಆರ್ಥಿಕ ಪರಿಹಾರದ ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಪ್ಯಾಕೇಜ್ ಪಡೆಯಲು ಅರ್ಜಿ ಸಲ್ಲಿಸೋದಕ್ಕೆ ಇಂದಿನಿಂದ ಆರಂಭವಾಗಲಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವಂತೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಸರ್ಕಾರವು ಕೋವಿಡ್-19 ಅಲೆಯ ತೀವ್ರತೆಯ ಹಿನ್ನಲೆಯಲ್ಲಿ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿ, ಆದೇಶಿಸಿರುವುದರಿಂದ, ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ರೂ.3,000ಗಳ ಪರಿಹಾರ ಧನವನ್ನು ನೀಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಿದೆ.ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸೇವಾಸಿಂಧುನಲ್ಲಿ ಅರ್ಜಿ ಸಲ್ಲಿಸುವ ಚಾಲಕರ ಅರ್ಜಿ ಪರಿಶೀಲಿಸಿದ ನಂತರ ಅವರ ಖಾತೆಗೆ ನೇರವಾಗಿ ಸಹಾಯಧನ ವರ್ಗಾಯಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಅಲ್ಲದೆ, ಸೇವಾ ಸಿಂಧು ಪೋರ್ಟಲ್ ಹೊರತುಪಡಿಸಿ ಬೇರೆ ಯಾವುದೇ ರೂಪದಲ್ಲೂ ಅರ್ಜಿ ಸಲ್ಲಿಸುವಂತಿಲ್ಲ ಎಂದು ಇಲಾಖೆ ಚಾಲಕರಿಗೆ ತಿಳಿಸಿದೆ. ಜತೆಗೆ ಸಹಾಯಧನ ಕೊಡಿಸುತ್ತೇವೆ ಎಂದು ವಂಚಿಸುವವರ ವಿರುದ್ಧವೂ ಎಚ್ಚರವಹಿಸುವಂತೆ ಮನವಿ ಮಾಡಿದೆ.

ಅರ್ಜಿ ಜತೆ ಸಲ್ಲಿಸಬೇಕಿರುವ ದಾಖಲೆಗಳು :-

* 2021ರ ಏಪ್ರಿಲ್ 24ರವರೆಗೆ ಚಾಲ್ತಿಯಲ್ಲಿರುವ ಚಾಲನಾ ಪರವಾನಗಿ (ಡಿಎಲ್)
* ಒಂದು ವಾಹನಕ್ಕೆ ಒಬ್ಬ ಚಾಲಕರು ಮಾತ್ರ ಅರ್ಜಿ ಸಲ್ಲಿಸಬೇಕು
* ಅರ್ಜಿ ಜತೆ ಆಧಾರ್ ಕಾರ್ಡ್, ವಾಹನ ನೋಂದಣಿ ಸಂಖ್ಯೆ, ಚಾಲನಾ ಪರವಾನಗಿ ಸಲ್ಲಿಸಬೇಕು
* ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರ.

Related Articles

Leave a Reply

Your email address will not be published. Required fields are marked *

You cannot copy content of this page