ರಾಜ್ಯ

ರಾಜ್ಯದಲ್ಲಿ ಜೂನ್ 2 ರವರೆಗೂ ಅಧಿಕ ಮಳೆ ಸಾಧ್ಯತೆ !

ಬೆಂಗಳೂರು :- ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ. ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಓಣಹವೆ ಮುಂದುವರೆಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದ ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೂರು ದಿನ ಅಧಿಕ ಮಳೆಮಳೆಯಾಗಲಿದೆ.

ಮುಂಗಾರು ಮಳೆ ಸುರಿಸುವ ನೈಋುತ್ಯ ಮಾನ್ಸೂನ್ ಮಾರುತಗಳು ಮೇ 31ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರದ ಕೊನೆಗೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಸೃಷ್ಟಿಯಾದ 2 ಚಂಡಮಾರುತಗಳೇ ಮಾನ್ಸೂನ್ ಮಾರುತಗಳ ಈ ಚಲನೆಗೆ ಕಾರಣ ಎನ್ನಲಾಗಿದೆ. ಕಳೆದ ವಾರವಷ್ಟೇ ಟೌಕ್ಟೇ ಚಂಡಮಾರುತದಿಂದಾಗಿ ಸಾಕಷ್ಟು ರಾಜ್ಯಗಳು ನಲುಗಿ ಹೋಗಿದ್ದವು. ಇದೀಗ ಅದರ ಬೆನ್ನಲ್ಲೇ ಯಾಸ್ ಚಂಡಮಾರುತ ಕೂಡ ಅಪ್ಪಳಿಸಿದೆ. ಹೀಗಾಗಿ ಮಾನ್ಸೂನ್ ಮಾರುತಗಳ ಚಲನೆಯಲ್ಲಿ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.

Related Articles

Leave a Reply

Your email address will not be published. Required fields are marked *

You cannot copy content of this page