ರಾಜ್ಯ

ಜೂನ್ 4ರ ತನಕ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಂಭವ ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು :- ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜೂ. 4 ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಕ್ಕೆ ಮುಂಗಾರು ಆಗಮನವಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ?

ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ , ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಕೋಲಾರ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 4ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಈ ವರ್ಷ ಮುಂಗಾರು ಮಳೆ ಕೊಂಚ ತಡವಾಗಲಿದ್ದು, ನಾಳೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ. ಕರ್ನಾಟಕದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಜೂನ್ 5 ಅಥವಾ 6ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್​ಎನ್​ಡಿಎಂಸಿ ಸೈಂಟಿಫಿಕ್ ಆಫೀಸರ್ ಎಸ್​.ಎಸ್​.ಎಂ. ಗವಾಸ್ಕರ್, ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

Related Articles

Leave a Reply

Your email address will not be published. Required fields are marked *

You cannot copy content of this page