ಶಿಕ್ಷಣ

ದ್ವಿತೀಯ PU ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್.!

ಬೆಂಗಳೂರು :- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ವಿದ್ಯಾರ್ಥಿಗಳ ಎಸೆಸೆಲ್ಸಿ ಫಲಿತಾಂಶಗಳನ್ನೂ ಅವಲೋಕಿಸಿ ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕರ್ನಾಟಕ‌ ಪ್ರೌಢ ಶಿಕ್ಷಣ‌ಪರೀಕ್ಷಾ ಮಂಡಳಿಯ ವತಿಯಿಂದ‌ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

You cannot copy content of this page