ರಾಜ್ಯ

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು :- ರಾಜ್ಯ ಸರ್ಕಾರವು ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿ 2015 ರ ಜ.1 ಕ್ಕಿಂತ ಮೊದಲು ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶವನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಕರ್ನಾಟಕ ಕಂದಾಯ ಕಾಯ್ದೆಯ ಕಲಂ 94 ಸಿ, 94 ಸಿಸಿ ಅನ್ವಯ ಅರ್ಜಿ ಸಲ್ಲಿಸಲು 2019 ರ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿತ್ತು. ಅದನ್ನು ತಿದ್ದುಪಡಿ ಮಾಡಿ 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಬಹುತೇಕ ಅರ್ಜಿಗಳ ವಿಲೇವಾರಿಯಾಗಿದ್ದು, ಬಾಕಿ ಉಳಿದವರು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

ಸದ್ಯಕ್ಕೆ 2022ರ ಮಾ.31ರ ಕಾಲಾವಕಾಶ ನೀಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ನಂತರ ಫಲಾನುಭವಿಗಳಿಗೆ 2023ರ ಮಾ.31ರ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

You cannot copy content of this page