ಶಿಕ್ಷಣ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ!

ಬೆಂಗಳೂರು :- ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಈ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು, ವಾಟ್ಸ್ ಆಯಪ್, ಇ-ಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಸಲ್ಲಿಸಬೇಕು. ಅದನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ.

ಮೊದಲ ಪ್ರಶ್ನೆಪತ್ರಿಕೆ(ಅಸೈನ್​ಮೆಂಟ್​)ಗೆ ಉತ್ತರಿಸಿ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಸಲ್ಲಿಸಲು ಜೂ.20 ಕೊನೆಯ ದಿನವಾಗಿದೆ. ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಬೇಕಿದೆ. ಇದೇ ರೀತಿ ಎರಡನೇ ಪತ್ರಿಕೆಗೆ ಉತ್ತರಿಸಿ ಜೂ.26ರಿಂದ ಜು.5ರೊಳಗೆ ಸಲ್ಲಿಸಬೇಕು. ಉಪನ್ಯಾಸಕರು ಜು.10ರೊಳಗೆ ಮೌಲ್ಯಮಾಪನ ಮಾಡಬೇಕು. ಎರಡು ಪರೀಕ್ಷೆಗಳ ಅಂಕಗಳ ಸಮೀಕರಣವನ್ನು ಜು.15 ರೊಳಗೆ ಮುಗಿಸಿ ಜು.20 ರೊಳಗೆ ಎಸ್​ಎಟಿಎಸ್​ಗೆ ಅಪ್​ಲೋಡ್​ ಮಾಡಬೇಕು. ವಿದ್ಯಾರ್ಥಿಗಳಿಗೆ ಪ್ರತಿ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು. ಪ್ರತಿ ಪತ್ರಿಕೆಗೆ 30 ರಂತೆ ಎರಡು ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕಗಳನ್ನು ಉಪನ್ಯಾಸಕರು ಆಂತರಿಕ ಮೌಲ್ಯಮಾಪನವೆಂದು ನೀಡಬೇಕು. ಪ್ರಯೋಗ ಸಹಿತ ವಿಷಯಗಳಿಗೆ ಪ್ರತ್ಯೇಕವಾಗಿ ಅಂಕಗಳನ್ನು ನೀಡಬೇಕಿದೆ. ಈ ಹಿಂದೆ ನಡೆಸಿದ ಪ್ರಯೋಗಿಕ ತರಗತಿಗಳ ಆಧಾರದ ಮೇಲೆ ನಿಪ್ಪಕ್ಷಪಾತವಾಗಿ ಅಂಕ ನೀಡಬೇಕೆಂದು ಇಲಾಖೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

You cannot copy content of this page