ಇತರ ಸುದ್ದಿ

ಇ-ಕಾಮರ್ಸ್ ವಂಚನೆ ತಡೆಗೆ ಕೇಂದ್ರದಿಂದ ಮಹತ್ವದ ಕ್ರಮ, ನಿಯಮದಲ್ಲಿ ಬದಲಾವಣೆ

ನವದೆಹಲಿ :- ಇ-ಜಾಲತಾಣಗಳಲ್ಲಿ ಯಾವುದೇ ಉತ್ಪನ್ನವನ್ನು ಫ್ಲಾಶ್‌ ಸೇಲ್‌ ಅಡಿಯಲ್ಲಿ ಮಾರಾಟ ಮಾಡುವುದಕ್ಕೆಕೇಂದ್ರ ಸರ್ಕಾರ ನಿರ್ಬಂಧ ಹೇರಲು ನಿರ್ಧರಿಸಿದೆ. ಫ್ಲಾಶ್‌ ಸೇಲ್‌ ಹೆಸರಿನಲ್ಲಿ ನಕಲಿ ಕಂಪನಿಗಳು, ತಮ್ಮ ಉತ್ಪನ್ನಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದಕ್ಕೆ ಲಗಾಮು ಹಾಕುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ಫ್ಲ್ಯಾಷ್ ಸೇಲ್ ನಿಷೇಧ, ಮಾರಾಟಗಾರರು, ವಿತರಕರ ವೇದಿಕೆ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವ ಕುರಿತು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ. ಗ್ರಾಹಕರ ಹಿತರಕ್ಷಣೆ, ಮುಕ್ತ ಮತ್ತು ನ್ಯಾಯಸಮ್ಮತ ಸ್ಪರ್ಧೆ ಉತ್ತೇಜಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಇ-ಕಾಮರ್ಸ್ ಘಟಕಗಳು ಗ್ರಾಹಕರ ಆಯ್ಕೆಯನ್ನು ಸೀಮಿತಗೊಳಿಸುವ ಕಾರ್ಯದಲ್ಲಿ ತೊಡಗಿದೆ.

ಫ್ಲಾಶ್‌ ಸೇಲ್‌ನಿರ್ಬಂಧದಜೊತೆ,ಪ್ರತಿಯೊಂದು “ಇ-ಕಾಮರ್ಸ್‌’ ಜಾಲತಾಣ ತನ್ನಲ್ಲಿ ಅನುಸರಣ ಅಧಿಕಾರಿ ಹಾಗೂ ಸಾರ್ವಜನಿಕರ ಕುಂದು-ಕೊರತೆ ಆಲಿಸುವ ಅಧಿಕಾರಿಗಳನ್ನು ನೇಮಿಸುವ ಅಂಶಗಳುಳ್ಳ ಕರಡು ಪ್ರತಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.

ಇದು ಕುಂದುಕೊರತೆ ನಿವಾರಣಾ ಕಾರ್ಯವಿಧಾನವನ್ನು ಬಲಪಡಿಸುತ್ತದೆ. ಇದಲ್ಲದೆ, ಪ್ರತಿ ಇ-ಕಾಮರ್ಸ್ ಘಟಕದ ನೋಂದಣಿಗೆ ಪ್ರಸ್ತಾಪಿಸಲಾಗಿದೆ. ನಿಗದಿಪಡಿಸಿದ ನೋಂದಣಿ ಸಂಖ್ಯೆಯನ್ನು ವೆಬ್‌ಸೈಟ್‌ನಲ್ಲಿ ಮತ್ತು ಪ್ರತಿ ಆದೇಶದ ಇನ್‌ವಾಯ್ಸ್‌ ನಲ್ಲಿ ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ ಎಂದು ಹೇಳಲಾಗಿದೆ.

ಇದು ನಿಜವಾದ ಘಟಕಗಳ ಡೇಟಾಬೇಸ್ ರಚಿಸಲು ಸಹಾಯ ಮಾಡುತ್ತದೆ. ಅಲ್ಲದೇ, ಗ್ರಾಹಕರು ವಹಿವಾಟು ನಡೆಸುವ ಮೊದಲು ಅದರ ನೈಜತೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಎನ್ನಲಾಗಿದೆ.

ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ತಪ್ಪಾಗಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಂದರೆ, ಉದ್ದೇಶಪೂರ್ವಕವಾಗಿ ಮಾಹಿತಿಯನ್ನು ತಪ್ಪಾಗಿ ನಿರೂಪಿಸುವ ಮೂಲಕ ಸರಕು ಮತ್ತು ಸೇವೆ ಮಾರಾಟ ಮಾಡುವುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

You cannot copy content of this page