ಶಿಕ್ಷಣ

BREAKING NEWS: SSLC ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು :- ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಾಂಕ ಘೋಷಣೆಯಾಗಿದ್ದು, ಜುಲೈ 19 ಹಾಗೂ ಜುಲೈ 22ರಂದು ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದ್ದು, 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿಯಾಗಲಿದ್ದಾರೆ. 73,066 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಇನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಸಿಇಓ, ಎಸ್​ಪಿಗಳು ಜೊತೆ ಸಭೆ ಮಾಡಿದ್ದೇವೆ. ಕಳೆದ ವರ್ಷ ಆರು ದಿನ ಪರೀಕ್ಷೆ ಮಾಡಿದ್ದೇವೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಕಳೆದ ವರ್ಷ ಎಲ್ಲರ ಮೆಚ್ಚಿಗೆ ಗಳಿಸಿದ್ದೇವೆ  ಸದ್ಯ ಈ ವರ್ಷ ಎರಡು ದಿನ ಪರೀಕ್ಷೆ ನಡೆಯಲಿದೆ. ಓಎಂಆರ್ ಸೀಟ್​ನಲ್ಲಿ ವಿದ್ಯಾರ್ಥಿಗಳು ಉತ್ತರ ಭರ್ತಿ ಮಾಡಬೇಕು. ಕಳೆದ ವರ್ಷ ಪರೀಕ್ಷೆ ಆಗಿರಲಿಲ್ಲ. ಮಕ್ಕಳಿಗೆ ಹಬ್ಬವಾಗಿತ್ತು. ಈ ಬಾರಿ ಪರೀಕ್ಷೆ ಮಕ್ಕಳ ಸುರಕ್ಷತಾ ಕೇಂದ್ರ ಆಗಿರಲಿದೆ ಎಂದಿದ್ದಾರೆ.

ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಯುವ ಜುಲೈ 19 ಮತ್ತು 22ರಂದು ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 (ನಿಷೇಧಾಜ್ಞೆ) ಜಾರಿಗೊಳಿಸಲಾಗುವುದು. ಈ ವರ್ಷ ಸರಳವಾದ ಮಾದರಿಯಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು. ಓಎಂಆರ್ ಶೀಟ್​ನಲ್ಲಿ ವಿದ್ಯಾರ್ಥಿಗಳು ಉತ್ತರಗಳನ್ನು ಭರ್ತಿ ಮಾಡಬೇಕು. ಜುಲೈ 19 ಮತ್ತು 22ರಂದು ಬೆಳಗ್ಗೆ 10.30ರಿಂದ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.

Related Articles

Leave a Reply

Your email address will not be published. Required fields are marked *

You cannot copy content of this page