ರಾಜ್ಯ

ಕರ್ನಾಟಕ ಲೋಕ ಸೇವಾ ಆಯೋಗದ ವಿವಿಧ ಪರೀಕ್ಷೆಗಳ ದಿನಾಂಕ ಪ್ರಕಟ.

ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ದಿನಾಂಕ 17-08-2020 ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ನಡೆಸುತ್ತದೆ.

2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ದಿನಾಂಕ 18-08-2020 ರಿಂದ 16-09-2020 ರವರೆಗೆ ನಡೆಯುತ್ತದೆ.

ದಿನಾಂಕ 24-08-2020 ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 106 ಹುದ್ದೆಗಳ
ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

You cannot copy content of this page