ಶಿಕ್ಷಣ

ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಕ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸಜ್ಜು.

ನವದೆಹಲಿ: ಶಿಕ್ಷಣ  ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಕ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಇದಕ್ಕೆ  ಆಯೋಗ (ಯುಜಿಸಿ) ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎ ಐಸಿಟಿಇ) ಸಲಹೆ ಬಯಸಿದ್ದಾರೆ.

ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಆನ್​ಲೈನ್​ ಶಿಕ್ಷಣ ವ್ಯವಸ್ಥೆಯಾಗಿ ರೂಪಿಸುವ ಮಹತ್ತರ ಉದ್ದೇಶ ಹೊಂದಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಅಗತ್ಯವೇ ಇರುವುದಿಲ್ಲ. ಜತೆಗೆ, ಶಿಕ್ಷಣ ಸಂಸ್ಥೆಗಳ ಮೇಲಿನ ಆರ್ಥಿಕ ಹೊರೆಯನ್ನು ಇದು ಕಡಿಮೆ ಮಾಡಲಿದೆ.ಇದಷ್ಟೇ ಅಲ್ಲ, ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ ಹಾಗೂ ಐಐಎಂಗಳನ್ನು ಕೂಡ ಈ ಆನ್​ಲೈನ್​ ಶಿಕ್ಷಣ ವ್ಯವಸ್ಥೆಯ ಭಾಗವನ್ನಾಗಿಸಲು ಉದ್ದೇಶಿಸಲಾಗಿದೆ.

ನೀಲಿನಕ್ಷೆ ತಯಾರಿಸಲು ಎಐಸಿಟಿಇ ಅಧ್ಯಕ್ಷ ಅನಿಲ್​ ಸಹಸ್ರಬುದ್ಧೆ ಹಾಗೂ ಯುಜಿಸಿ ಉಪಾಧ್ಯಕ್ಷ ಡಾ. ಎಂ.ಪಿ. ಪೂನಿಯಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆನ್​ಲೈನ್​ ಶಿಕ್ಷಣ ಒದಗಿಸುವ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಡಿಜಿಟಲ್​ ವೇದಿಕೆಯನ್ನು ರೂಪಿಸುವ ಹೊಣೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

You cannot copy content of this page