ಇತರ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ : ಎಂಟು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ !

ಬೆಂಗಳೂರು: ರಾಜ್ಯದ ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ.16ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.16ರಿಂದ 20ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.

Related Articles

Leave a Reply

Your email address will not be published. Required fields are marked *

You cannot copy content of this page