ಇತರ ಸುದ್ದಿ

ಕೊರೋನಾ ಲಕ್ಷಣ ಇಲ್ಲದಿದ್ದರೂ ಸೋಂಕಿತರ ಸಂಪರ್ಕಕ್ಕೆ ಬಂದವರ ಪರೀಕ್ಷೆ ಅಗತ್ಯ.

ವಿಶ್ವಸಂಸ್ಥೆ: ಕೊರೊನಾ ವೈರಸ್ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಅವರಿಗೆ ರೋಗ ಲಕ್ಷಣ ಇದ್ದರೂ ಇಲ್ಲದಿದ್ದರೂ ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ರೋಗ ಲಕ್ಷಣ ಇಲ್ಲದಿದ್ದರೆ ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ (ಸಿಡಿಸಿ) ಕೇಂದ್ರದ ವೆಬ್‌ಸೈಟ್‌ನಲ್ಲಿ ಕಳೆದ ವಾರ ಉಲ್ಲೇಖಿಸಲಾಗಿತ್ತು.

ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಡಬ್ಲ್ಯುಎಚ್‌ಒದ ಕೊರೊನಾ ತಾಂತ್ರಿಕ ವಿಭಾಗದ ಮುಖ್ಯಸ್ಥೆ ಮಾರಿಯಾ ವ್ಯಾನ್ ಕೆರ್ಖೋವ್, ರೋಗಲಕ್ಷಣಗಳ ಬೆಳವಣಿಗೆಯನ್ನು ಲೆಕ್ಕಿಸದೆ ಕೋವಿಡ್-19 ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಅಮೆರಿಕದ ಹೆಸರು ಉಲ್ಲೇಖಿಸದೆಯೇ ಹೇಳಿದ್ದಾರೆ.

‘ರೋಗ ಲಕ್ಷಣ ಇರುವವರೂ ಹಾಗೂ ಇಲ್ಲದವರೂ ಸೊಂಕು ಹರಡುತ್ತಾರೆ ಎಂಬುದು ನಮಗೆ ತಿಳಿದಿದೆ.

ಸೋಂಕು ಹರಡುವಿಕೆಯ ತೀವ್ರತೆಯ ವಿವಿಧ ಹಂತಗಳಲ್ಲಿ ದೇಶಗಳಿಗೆ ಡಬ್ಲ್ಯುಎಚ್‌ಒ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ತಮ್ಮ ಸಾಮರ್ಥ್ಯ, ಸೋಂಕು ಹರಡುವಿಕೆಯ ತೀವ್ರತೆಗೆ ಅನುಗುಣವಾಗಿ ಪರೀಕ್ಷೆ ನಡೆಸುವುದನ್ನು ಆಯಾ ದೇಶಗಳ ವಿವೇಚನೆಗೆ ಬಿಟ್ಟುಬಿಡಲಾಗಿತ್ತು’ ಎಂದೂ ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ಈವರೆಗೆ 2.4 ಕೋಟಿ ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 8,26,000 ಮಂದಿ ಮೃತಪಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

You cannot copy content of this page